ಅರ್ಜಿದಾರರು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 14(ಎ) ಅಥವಾ 69(3) ರಡಿ ಭೂಉಪಯೋಗ ಬದಲಾವಣೆ ಕೋರಿ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಿದಲ್ಲಿ, ನಿಯಮಾನುಸಾರ ಪರಿಶೀಲಿಸಿ ಪ್ರಾಧಿಕಾರದ ಸಭೆಯಲ್ಲಿ ಮಂಡಿಸಲಾಗುವುದು. ನಂತರ ಪ್ರಾಧಿಕಾರದ ಸಭೆಯ ತೀರ್ಮಾನದಂತೆ ಪ್ರಸ್ತಾವನೆಯನ್ನು ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರ ಮುಖಾಂತರ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ.
ಮೂಲ: ಬಿ.ಎಂ.ಐ.ಸಿ.ಎ.ಪಿ.ಎ, ಕರ್ನಾಟಕ ಸರ್ಕಾರ.